×
Ad

ರಾಜ್ಯದ ಜನರ ತೆರಿಗೆ ಹಣಕ್ಕಾದ ದ್ರೋಹವನ್ನು ಸಮರ್ಥಿಸಿದ ಜೋಶಿಯನ್ನು ಸೋಲಿಸಲೇಬೇಕು : ಸಿಎಂ ಸಿದ್ದರಾಮಯ್ಯ

Update: 2024-04-25 15:40 IST

Photo: x/@siddaramaiah

ಶಿಗ್ಗಾಂವಿ : ರಾಜ್ಯದ ಜನರ ತೆರಿಗೆ ಹಣಕ್ಕೆ ಕೇಂದ್ರದಿಂದ ಆದ ದ್ರೋಹವನ್ನು ಸಮರ್ಥಿಸಿದ ಪ್ರಹ್ಲಾದ್ ಜೋಶಿಯನ್ನು ಈ ಬಾರಿ ಸೋಲಿಸಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಹುಬ್ಬಳ್ಳಿ ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೋದ್ ಹಸೂಟಿ ಪರವಾಗಿ ಪ್ರಜಾಧ್ವನಿ-2 ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದರು.

"ನರೇಂದ್ರ ಮೋದಿಯವರು ರಾಜ್ಯಕ್ಕೆ ಮಾಡಿದ ಅನ್ಯಾಯವನ್ನು 10 ವರ್ಷಗಳಲ್ಲಿ ಪ್ರಹ್ಲಾದ್ ಜೋಶಿಯವರು ಒಂದೇ ಒಂದು ದಿನವೂ ಪ್ರಶ್ನಿಸಿಲ್ಲ. ರಾಜ್ಯಕ್ಕೆ 15 ನೇ ಹಣಕಾಸು ಆಯೋಗದಲ್ಲೂ ವಂಚನೆ ಆಯಿತು. ಬರಗಾಲ ಬಂದಾಗಲೂ ಅನುದಾನ ಕೊಡದ ಕೇಂದ್ರ ಸರ್ಕಾರವನ್ನು ಪ್ರಶ್ನಿಸದ, ರಾಜ್ಯದ ಜನರ ಪರವಾಗಿ ನೆಪಕ್ಕೂ ಮಾತನಾಡದ ಪ್ರಹ್ಲಾದ್ ಜೋಶಿಯಿಂದ ನಿಮ್ಮ ಮತಕ್ಕೆ ಗೌರವ ಬಂದಿದೆಯೇ?" ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ರಾಜ್ಯದಲ್ಲಿ ಇಷ್ಟು ಭೀಕರ ಬರಗಾಲ ಇದ್ದರೂ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಪಾಲಿನ ಒಂದೇ ಒಂದು ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ರಾಜ್ಯವನ್ನು ಪ್ರತಿನಿಧಿಸಿದ್ದರೂ ಪ್ರಯೋಜನ ಆಗಲಿಲ್ಲ. ಹೀಗಾಗಿ ಇವರನ್ನು ಸೋಲಿಸಿ ಮನೆಗೆ ಕಳುಹಿಸಿದರೆ ಮಾತ್ರ ನಿಮ್ಮ ಮತಕ್ಕೆ ಗೌರವ ಬರುತ್ತದೆ ಎಂದರು.

ಯುವ ಸಜ್ಜನ, ಹೃದಯವಂತ ಮತ್ತು ಸಮಾಜದ ಬಗ್ಗೆ ಕಾಳಜಿ ಇರುವ ಜಾತ್ಯತೀತ ವ್ಯಕ್ತಿತ್ವದ ವಿನೋದ್ ಅಸೂಟಿಯವರು ಈ ಬಾರಿ ಗೆದ್ದೇ ಗೆಲ್ಲುತ್ತಾರೆ. ಇವರ ಗೆಲುವಿಗೆ ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಕರೆ ನೀಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ , ಮಾಜಿ ಸಚಿವ ವಿನಯ್ ಕುಲಕರ್ಣಿ, ಲೋಕಸಭಾ ಅಭ್ಯರ್ಥಿ ವಿನೋದ್ ಅಸೂಟಿ ಸೇರಿ ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News