×
Ad

ಸಿಎಂ ಕಾರಿಗೆ ಮುತ್ತಿಗೆ ಹಾಕಲು ಯತ್ನ | ಕಪ್ಪು ಬಟ್ಟೆ ಪ್ರದರ್ಶನ, ಬಿಜೆಪಿ ಕಾರ್ಯಕರ್ತರು ವಶಕ್ಕೆ

Update: 2024-10-13 15:36 IST

ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರವು ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವುದನ್ನು  ಖಂಡಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಗೋಕುಲ ರಸ್ತೆಯಲ್ಲಿ ರವಿವಾರ ಸಿಎಂ ಸಿದ್ದರಾಮಯ್ಯ ವಾಹನ ತಡೆದು ಮುತ್ತಿಗೆ ಹಾಕಲು ಯತ್ನಿಸಿದರು.

ಇದಲ್ಲದೆ,  ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ್‌ ಸೇರಿದಂತೆ ನೂರಕ್ಕೂ ಹೆಚ್ಚು ಮಂದಿಯನ್ನು ಅನುಮತಿ ಪಡೆಯದೆ ಪ್ರತಿಭಟನೆ ನಡೆಸಲು ಮುಂದಾದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು, ಬಳಿಕ ಬಿಡುಗಡೆ ಮಾಡಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಸವದತ್ತಿಗೆ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಅಕ್ಷಯ ಪಾರ್ಕ್‌ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News