×
Ad

ಕಾಂಗ್ರೆಸ್ ನದ್ದು ಯಾವತ್ತೂ ಹೊಡಿ-ಬಡಿ ಸಂಸ್ಕೃತಿಯೇ: ಪ್ರಹ್ಲಾದ್ ಜೋಶಿ

Update: 2024-03-26 11:55 IST

ಹುಬ್ಬಳ್ಳಿ: ಕಾಂಗ್ರೆಸ್ಸಿಗರಿಗೆ ಯಾವಾಗಲೂ ಹೊಡಿ-ಬಡಿ ಸಂಸ್ಕೃತಿಯೇ ಇದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಅವರು ಶಿವರಾಜ್ ತಂಗಡಗಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾಗಿ ಇದ್ದುಕೊಂಡು ಹೀಗೆ ಹೊಡಿ ಬಡಿಯುವ ರೀತಿ ಪ್ರಚೋದನೆ ನೀಡುವುದು ಅವರ ವ್ಯಕ್ತಿತ್ವ ಮತ್ತು ಹುದ್ದೆಗೆ ಘನತೆ, ಗೌರವ ತರುವಂಥದ್ದಲ್ಲ ಎಂದು ಹೇಳಿದರು.

ಮೋದಿ ಬಗ್ಗೆ ದ್ವೇಷ ಕಾರುವುದೇಕೆ? 

ಕಾಂಗ್ರೆಸ್ ನಾಯಕರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ದ್ವೇಷ ಕಾರುವ ಮನೋಭಾವವಿದೆ. ಇದಕ್ಕೆಲ್ಲ ಜನರೇ ಉತ್ತರ ಕೊಡುತ್ತಾರೆ ಎಂದು ಎಚ್ಚರಿಸಿದರು.

ಪ್ರಧಾನಿ ಮೋದಿ ಹೆಸರು ಹಳಿದರೆ ವರ್ಚಸ್ಸು ಕುಗ್ಗುವಂತೆ ಮಾಡಬಹುದು ಎಂದು ಭಾವಿಸಿದ್ದರೆ ಅದು ನಿಮ್ಮ ಭ್ರಮೆ. ನೀವೆಷ್ಟು ಮೋದಿ ಅವರನ್ನು ದ್ವೇಷಿಸುತ್ತೀರಿ ಮತ್ತು ಸೇಡಿನ ಭಾವನೆಯಿಂದ ವರ್ತಿಸುತ್ತಿರೋ? ಅಷ್ಟೇ ಪ್ರೀತಿಯಿಂದ ಜನ ಮೋದಿ ಅವರನ್ನು ಕಾಣುತ್ತಾರೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News