×
Ad

ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ : ಪ್ರಹ್ಲಾದ್‌ ಜೋಶಿ

Update: 2024-04-26 14:52 IST

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಜನರ ಕೈಗೆ ಚೊಂಬು ಕೊಡುವುದನ್ನು ಕಾಂಗ್ರೆಸ್ ನಿಲ್ಲಿಸಲಿಲ್ಲ. ಪರಿಣಾಮ ಜನರೂ ಕಾಂಗ್ರೆಸ್ಸಿಗರ ಕೈಗೆ ಚೊಂಬು ಕೊಡುತ್ತಾ ಬಂದರು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿಗರಿಗೆ ಚೊಂಬು ಹಿಡಿದು ಅಡ್ಡಾಡೋದು ಅಭ್ಯಾಸವಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ದೇಶದಲ್ಲಿ 14 ಕೋಟಿಗು ಅಧಿಕ ಶೌಚಗೃಹ ನಿರ್ಮಿಸಿ ಜನರು ಕೈಯಲ್ಲಿ ಚೊಂಬು ಹಿಡಿಯುವುದನ್ನು ನಿಲ್ಲಿಸಿದ್ದಾರೆ ಎಂದು  ಹೇಳಿದರು.

ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸೋಲಿಸಿದ್ದಲ್ಲದೆ, ಅವರ ವಿರುದ್ಧ ಗೆದ್ದವರಿಗೆ ಪದ್ಮವಿಭೂಷಣ ಕೊಟ್ಟು ಸತ್ಕರಿಸುವ ಮೂಲಕ ದಲಿತರ ಕೈಗೆ ಚೊಂಬು ಕೊಟ್ಟವರು ಕಾಂಗ್ರೆಸ್ಸಿಗರು. ಇದೆಲ್ಲದರ ಪರಿಣಾಮ ಜನರೂ ನಿಮ್ಮ ಕೈಗೆ ಚೊಂಬು ಕೊಟ್ಟು ಕಳುಹಿಸುತ್ತಿದ್ದಾರೆ. ದೇಶದ 20-25 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಈಗ ಎರಡೇ ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಕುಟುಕಿದರು.

ಛತ್ತೀಸ್‌ಗಡ, ರಾಜಸ್ಥಾನ, ಮಧ್ಯಪ್ರದೇಶ ಹೀಗೆ ಎಲ್ಲೆಡೆಯೂ ಹೀನಾಯವಾಗಿ ಸೋಲಿಸಿ ವಿರೋಧ ಪಕ್ಷದ ಸ್ಥಾನದಲ್ಲೂ ಕುಳಿತುಕೊಳ್ಳದಂತೆ ಜನ ನಿಮ್ಮ ಕೈಗೆ ಚೊಂಬು ಕೊಟ್ಟಿದ್ದಾರೆ ನೆನಪಿಟ್ಟುಕೊಳ್ಳಿ ಎಂದು ಜೋಶಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News