×
Ad

Dharwad | ವೈದ್ಯನ ಹತ್ಯೆ: ಮಗನ ಮೇಲೂ ಚಾಕುವಿನಿಂದ ದಾಳಿ

ಪತ್ನಿ ಪೊಲೀಸ್‌ ವಶಕ್ಕೆ

Update: 2026-07-15 22:39 IST

ಧಾರವಾಡ : ಖಾಸಗಿ ಆಸ್ಪತ್ರೆಯ ವೈದ್ಯರೋರ್ವರನ್ನು ಇರಿದು ಹತ್ಯೆ ಮಾಡಿರುವ ಘಟನೆ ನಗರದ ಬಾರಾಕೊಟ್ರಿ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್‌ನಲ್ಲಿ ಬುಧವಾರ ವರದಿಯಾಗಿದೆ.

ಮೃತರನ್ನು ಖಾಸಗಿ ಆಸ್ಪತ್ರೆಯ ಅನೆಸ್ತೆಸಿಯಾ ವೈದ್ಯ ಡಾ.ಕಿರಣ್ ಎಂದು ಗುರುತಿಸಲಾಗಿದೆ.

ಘಟನೆಯ ವೇಳೆ ವೈದ್ಯರ ಪುತ್ರ ನಿಹಿತ್ ಎಂಬಾತನ ಮೇಲೂ ಮನಬಂದಂತೆ ಚಾಕುವಿನಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು, ಮೃತ ವೈದ್ಯರ ಪತ್ನಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಧಾರವಾಡ ಉಪ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿಕೆ:

ಈ ಸಂಬಂಧ ಪ್ರತಿಕ್ರಿಯಿಸಿರುವ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಘಟನಾ ಸ್ಥಳಕ್ಕೆ ಭೇಟಿ ನೀಡಿದ ವೇಳೆ ಒಂದು ಕೊಠಡಿಯಲ್ಲಿ ವೈದ್ಯ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮತ್ತೊಂದು ಕೊಠಡಿಯಲ್ಲಿ ಬಾಲಕ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ. ಆತ ಉಸಿರಾಡುತ್ತಿರುವುದನ್ನು ಗಮನಿಸಿದ ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಪತ್ನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಹತ್ಯೆಗೆ ನಿಖರ ಕಾರಣ ಏನು ಎಂಬುದು ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News