ಧಾರವಾಡ : ತಾಲೂಕಿನ ಮನಸೂರ ಹಾಗೂ ಬೆನಕಟ್ಟಿ ಗ್ರಾಮಗಳ ಸುತ್ತಮುತ್ತ ಕಪ್ಪು ಚಿರತೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.

ದನ ಮೇಯಿಸಲು ಹೊಲಕ್ಕೆ ತೆರಳಿದ್ದ ಯಲ್ಲಪ್ಪ ಎಂಬ ರೈತನ ಬೆನ್ನ ಹಿಂದೆಯೇ ಚಿರತೆ ಬಂದು ಕುಳಿತ ಘಟನೆ ನಡೆದಿದೆ. ಇದನ್ನು ಕಂಡ ರೈತ ಪಕ್ಕದ ಹೊಲದಲ್ಲಿ ಭತ್ತ ಕಟಾವು ಮಾಡುತ್ತಿದ್ದ ಕಾರ್ಮಿಕರನ್ನು ಕೂಗಿ ಕರೆದಿದ್ದಾರೆ. ಸುಮಾರು ಒಂದೂವರೆ ಗಂಟೆ ಹೊಲದಲ್ಲೇ ಕುಳಿತಿದ್ದ ಚಿರತೆಯನ್ನು ಗ್ರಾಮಸ್ಥರು ಕೂಡಿ ಓಡಿಸಿದ ಬಳಿಕ ಅದು ಅರಣ್ಯದತ್ತ ತೆರಳಿದೆ.

ಇನ್ನೂ ಹೊಲಗಳಲ್ಲಿ ಚಿರತೆಯ ಹೆಜ್ಜೆ ಗುರುತುಗಳೂ ಪತ್ತೆಯಾಗಿವೆ. ವಿಷಯ ತಿಳಿದು ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಭತ್ತ ಕಟಾವು ಕಾರ್ಯ ನಡೆಯುತ್ತಿದ್ದು, ಚಿರತೆ ಭೀತಿಯಿಂದ ರೈತರು ಹೊಲಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಚಿರತೆಯನ್ನು ಸೆರೆಹಿಡಿದು ಗ್ರಾಮಸ್ಥರ ಆತಂಕ ನಿವಾರಿಸಬೇಕು ಎಂದು ಗ್ರಾಮಸ್ಥರು ಅರಣ್ಯ ಇಲಾಖೆ ಹಾಗೂ ಜಿಲ್ಲಾಡಳಿತವನ್ನು ಗ್ರಾಮದ ಜನರು ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor