×
Ad

Dharwad | ಡಿವೈಡರ್​ಗೆ ಢಿಕ್ಕಿ ಹೊಡೆದು ಹೊತ್ತಿ ಉರಿದ ಕಾರು; ಲೋಕಾಯುಕ್ತ ಇನ್ಸ್​ಪೆಕ್ಟರ್ ಸಜೀವ ದಹನ

Update: 2025-12-05 23:33 IST

ಧಾರವಾಡ : ಕಾರೊಂದು ಡಿವೈಡರ್​ಗೆ ಢಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿದ್ದ ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನವಾಗಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಬಳಿ ದುರ್ಘಟನೆ ನಡೆದಿದೆ

ಹಾವೇರಿಯ ಲೋಕಾಯುಕ್ತದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಪಂಚಾಕ್ಷರಯ್ಯ ಸಾಲಿಮಠ ಎಂಬುವವರೇ ಘಟನೆಯಲ್ಲಿ ಮೃತಪಟ್ಟಿದ್ದು, ಕಾರು ಕೂಡಾ ಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಮದುವೆ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಗದಗಕ್ಕೆ ಹೋಗುವ ಸಮಯದಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News