ಧಾರವಾಡ | ಗ್ಯಾಸ್ ಸಿಲಿಂಡರ್ ಸ್ಪೋಟ : 3 ಮಕ್ಕಳ ಸಹಿತ 6 ಮಂದಿಗೆ ಗಾಯ
Update: 2026-01-02 12:26 IST
ಸಾಂದರ್ಭಿಕ ಚಿತ್ರ
ಧಾರವಾಡ : ಧಾರವಾಡದ ಹೊಸಯಲ್ಲಾಪುರ ಸುಣ್ಣದ ಬಟ್ಟಿ ಓಣಿಯಲ್ಲಿ ಇಸ್ಮಾಯಿಲ್ ಹೊರಕೇರಿ ಎಂಬುವವರ ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಘಟನೆ ವರದಿಯಾಗಿದೆ.
ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದು, ಅವರಲ್ಲಿ ಓರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ.
ಗಾಯಗೊಂಡವರನ್ನು ಇನಾಯಾ (3), ಕೈಫ್ (7), ಅಮಿನಾ (26), ಇಸ್ಮಾಯಿಲ್ (35), ಜರಿನಾ (65) ಮಹಿರಾನ್ (13) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ತಕ್ಷಣ ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸಿಲಿಂಡರ್ ಸ್ಪೋಟದ ತೀವ್ರತೆಗೆ ಮನೆಯ ಮೇಲ್ಛಾವಣಿಯ ತಗಡುಗಳು ಹಾರಿ ಹೋಗಿದೆ. ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದ್ದು, ವೈದ್ಯರು ತೀವ್ರ ಚಿಕಿತ್ಸೆ ನೀಡುತ್ತಿದ್ದಾರೆ.