ಧಾರವಾಡ : ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕರೆ ನೀಡಿದ ಹಿನ್ನೆಲೆಯಲ್ಲಿ ಧಾರವಾಡ ನಗರದಲ್ಲಿ ಖಾಸಗಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಶಿಕ್ಷಕರು ಹಾಗೂ ಸಿಬ್ಬಂದಿ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಖಾಸಗಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಮತ್ತು ಸಿಬ್ಬಂದಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೊಟ್ಟ ಭರವಸೆಯಂತೆ ಸರ್ಕಾರ ನಡೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ನೌಕರರ ಹೋರಾಟ ಸಮಿತಿ ಸೇರಿದಂತೆ ವಿವಿಧ ಶಿಕ್ಷಕ ಮತ್ತು ನೌಕರರ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬೇಡಿಕೆಗಳನ್ನು ಈಡೇರಿಸುವವರೆಗೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಅನಿರ್ದಿಷ್ಟಾವಧಿ ಹೋರಾಟ ಮುಂದುವರಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor