ಸಾಂದರ್ಭಿಕ ಚಿತ್ರ

ಧಾರವಾಡ: ಮೂವರು ಮಕ್ಕಳಿಗೆ ವಿಷವುಣಿಸಿದ ತಾಯಿ ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ಶನಿವಾರ ನಡೆದಿದೆ.

ಸವಿತಾ ಕುರಗುಂದ (38) ಎಂಬ ಮಹಿಳೆ ತನ್ನ ಮಕ್ಕಳಾದ ಗದಿಗೆವ್ವ ಕುರಗುಂದ (8), ಭಾಗ್ಯಶ್ರೀ ಕುರಗುಂದ (6) ಹಾಗೂ ಹರ್ಷ (2) ಅವರಿಗೆ ವಿಷ ನೀಡಿದ ಬಳಿಕ ತಾನೂ ವಿಷ ಸೇವಿಸಿರುವುದಾಗಿ ತಿಳಿದುಬಂದಿದೆ.

ಘಟನೆಯಲ್ಲಿ ತಾಯಿ ಸೇರಿದಂತೆ ನಾಲ್ವರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯರು ಕೂಡಲೇ ನಾಲ್ವರನ್ನೂ ಧಾರವಾಡದ ಕೆಎಂಸಿ ಆರ್ಐ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೃತ್ಯಕ್ಕೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor