×
Ad

ಅಂಜಲಿ ಹತ್ಯೆ ಪ್ರಕರಣ | ಹುಬ್ಬಳ್ಳಿ - ಧಾರವಾಡ ಪೊಲೀಸರ ವೈಫಲ್ಯವೇ ಕೊಲೆಗೆ ಕಾರಣ : ದಿಂಗಾಲೇಶ್ವರ ಸ್ವಾಮೀಜಿ

Update: 2024-05-16 15:34 IST

ಹುಬ್ಬಳ್ಳಿ : ರಾಜಕೀಯಕ್ಕಾಗಿ ನೇಹಾ ಹತ್ಯೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ರಾಜಕಾರಣಿಗಳು ಈಗ ಎಲ್ಲಿದ್ದಾರೆ? ಎಂದು ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಶ್ನಿಸಿದರು.

ಮೃತ ಅಂಜಲಿ ಅಂಬಿಗೇರ ಮನೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, "ಹುಬ್ಬಳ್ಳಿ - ಧಾರವಾಡ ನಗರದಲ್ಲಿ ಪೊಲೀಸರ ವೈಫಲ್ಯ ನಿಜಕ್ಕೂ ಈ ಕೊಲೆಗೆ ಕಾರಣವಾಗಿದೆ. ಓದಲು ಹೋಗುವ ಯುವತಿ ಪೊಲೀಸ್ ಠಾಣೆಗೆ ಹೋಗಿ ದೂರನ್ನು ನೀಡಿದರೂ ನಿರ್ಲಕ್ಷ್ಯ ಮಾಡಿರುವುದು ನಿಜಕ್ಕೂ ಖಂಡನೀಯ" ಎಂದು ಹೇಳಿದರು.

"ಚುನಾವಣೆಗಾಗಿ ನೇಹಾ ಕೊಲೆಯನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋಗಿರುವ ರಾಜಕೀಯ ನಾಯಕರು ಈಗ ಇಂತಹ ಬಡ ಕುಟುಂಬದ ನೆರವಿಗೆ ಬಾರದೇ ಇರುವುದು ನಿಜಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ. ಈ ಬಗ್ಗೆ ರಾಜ್ಯ ನಾಯಕರು ಪ್ರಾಮಾಣಿಕ ಪ್ರಯತ್ನದ ಮೂಲಕ ಅಂಜಲಿ ಸಾವಿಗೆ ನ್ಯಾಯ ಕೊಡಿಸುವ ಕಾರ್ಯವನ್ನು ಮಾಡಬೇಕು. ಈ ನಿಟ್ಟಿನಲ್ಲಿ ನಾಳೆ ದೊಡ್ಡಮಟ್ಟದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ" ಎಂದು ತಿಳಿಸಿದರು. 

ಮೃತ ಅಂಜಲಿ ಕುಟುಂಬದ ಜೊತೆಗೆ ನಾವಿದ್ದೇವೆ. ಅವಳ ಇಬ್ಬರು ತಂಗಿಯರ ಓದಿನ ಸಂಪೂರ್ಣ ಜವಾಬ್ದಾರಿಯನ್ನು ಬಾಲೆಹೊಸೂರು ಹಾಗೂ ಶಿರಹಟ್ಟಿ ಸಂಸ್ಥಾನ ಮಠಗಳು ಹೊರಲಿವೆ. ಅಲ್ಲದೇ ಆ ಇಬ್ಬರೂ ಯುವತಿಯರ ಭವಿಷ್ಯದ ಹಿತದೃಷ್ಟಿಯಿಂದ ದತ್ತು ಪಡೆಯುತ್ತೇವೆ ಎಂದು ಭರವಸೆ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News