×
Ad

ಚುನಾವಣೆ ಜಾತಿ ಮೇಲೆ ನಡೆಯಲ್ಲ, ಎಲ್ಲರಿಗೂ ಸ್ಪರ್ಧಿಸುವ ಹಕ್ಕಿದೆ : ಪ್ರಹ್ಲಾದ್‌ ಜೋಶಿ

Update: 2024-04-08 13:51 IST

ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಚುನಾವಣೆಗೆ ನಿಲ್ಲುವ ಹಕ್ಕಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ  ಹೇಳಿದರು.

ಧಾರವಾಡ ಲೋಕಸಭಾ ಚುನಾವಣೆಗೆ ದಿಂಗಾಲೇಶ್ವರ ಸ್ಪರ್ಧೆ ಬಗ್ಗೆ ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, "ಕಳೆದ ಹತ್ತು ವರ್ಷಗಳಲ್ಲಿ ಅಂದರೆ ಮೋದಿಯವರು ಬರುವ ಮುಂಚೆ ದೇಶ ಹೇಗಿತ್ತು, ಈಗ ಹೇಗಿದೆ ಎಂಬುದು ಜನರಿಗೆ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಬಂದ ಮೇಲೆ ಭಾರತ ದೇಶ 5ನೇ ಅತಿದೊಡ್ಡ ಆರ್ಥಿಕ ವ್ಯವಸ್ಥೆಯ ರಾಷ್ಟ್ರವಾಗಿ ಹೊರಹೊಮ್ಮಿದೆ" ಎಂದು ತಿಳಿಸಿದರು.

ʼದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವ ಬೇಕೇ? ರಾಹುಲ್ ಗಾಂಧಿ ಹಾಗೂ ಇತರರ ನೇತೃತ್ವ ಬೇಕೇ? ಎಂಬುದನ್ನು ನಿರ್ಧರಿಸುವ ಚುನಾವಣೆ. ಇಲ್ಲಿ ನಾನು ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ನೋಡಿಕೊಂಡು ಜನರು ಆಶೀರ್ವಾದ ಮಾಡುತ್ತಾರೆʼ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲಿಂಗಾಯತ ಮತಗಳ ಹೊಡೆತದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ಇಲ್ಲಿ ಯಾವುದೇ ಜಾತಿ ಆಧಾರದ ಮೇಲೆ ಚುನಾವಣೆ ಆಗುವುದಿಲ್ಲ. ಜನರು ದೇಶದ ಅಭಿವೃದ್ಧಿ ಹಾಗೂ ಸದೃಢ ನಾಯಕತ್ವದ ಆಧಾರದ ಮೇಲೆ ಆಶೀರ್ವಾದ ಮಾಡುತ್ತಾರೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News