ಹುಬ್ಬಳ್ಳಿ: ಕಬ್ಬಿನ ಬೆಲೆ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಹಮ್ಮಿಕೊಂಡಿರುವ ಪ್ರತಿಭಟನೆಗೆ ರೈತರು ಜಮಾವಣೆಗೊಳ್ಳುತ್ತಿದ್ದಾರೆ.

ವಿವಿಧ ರೈತ ಸಂಘಟನೆಗಳ ಸಾವಿರಾರು ರೈತರು ಹುಬ್ಬಳ್ಳಿಯ ಚೆನ್ನಮ್ಮ ವೃತ್ತ ಹಾಗೂ ನೆಹರೂ ಕ್ರೀಡಾಂಗಣದಲ್ಲಿ ಜಮಾಯಿಸುತ್ತಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಸ್ವಾಮಿನಾಥನ್ ಆಯೋಗದ ವರದಿ ಜಾರಿಗೊಳಿಸಬೇಕು, ರಾಜ್ಯದಲ್ಲಿ ಕೃಷಿ ಉತ್ಪನ್ನಗಳ ಉತ್ಪಾದನೆ ಹಾಗೂ ಮಾರಾಟಕ್ಕೆ ಪೂರ್ಣ ಪ್ರಮಾಣದ ಅನುಮತಿ ನೀಡಬೇಕು, ಸಕ್ಕರೆ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ 2025-26ನೇ ಸಾಲಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಹೆಚ್ಚುವರಿಯಾಗಿ ಪ್ರತಿ ಟನ್‌ಗೆ 300 ರೂ. ನೀಡಬೇಕು ಎಂದು ರೈತರು ಆಗ್ರಹಿಸುತ್ತಿದ್ದಾರೆ.

ಅಲ್ಲದೆ, ಕರ್ನಾಟಕ ಮಹಾದಾಯಿ ನೀರಾವರಿ ಯೋಜನೆಗೆ ಅಗತ್ಯವಿರುವ ಎಲ್ಲ ಪರವಾನಗಿಗಳನ್ನು ತ್ವರಿತವಾಗಿ ಪಡೆದು ಕಾಮಗಾರಿ ಆರಂಭಿಸಬೇಕು. ವಿಬಿ ಯೋಜನೆಯಲ್ಲಿ ಎಲ್ಲ ಕೃಷಿ ಚಟುವಟಿಕೆಗಳನ್ನು ಅಳವಡಿಸಬೇಕು ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor