×
Ad

ಹಾವೇರಿಯಲ್ಲಿ ಇಲಿ ಜ್ವರ ಪತ್ತೆ : 12 ವರ್ಷದ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ

Update: 2024-07-07 13:30 IST

ಹಾವೇರಿ : ಮುಂಗಾರು ಶುರುವಾದ ಬೆನ್ನಲ್ಲೇ ರಾಜ್ಯಾದ್ಯಂತ ಸೊಳ್ಳೆಗಳಿಂದ ಡೆಂಗ್ಯೂ ಜ್ವರ ಹರಡುತ್ತಿದ್ದು, ಝೀಕಾ ವೈರಸ್ ಬಗ್ಗೆಯೂ ಮುನ್ನೆಚ್ಚರಿಕೆ ವಹಿಸುವಂತೆ ಆರೋಗ್ಯ ಸೂಚನೆ ನೀಡಿದೆ. ಈ ಮಧ್ಯೆ ಹಾವೇರಿಯಲ್ಲಿ ಬಾಲಕನೊಬ್ಬಗೆ ಇಲಿ ಜ್ವರ ಕಾಣಿಸಿಕೊಂಡಿರುವುದು ವರದಿಯಾಗಿದೆ.

ಹಾವೇರಿ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿರುವ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಬಾಲಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಕಳೆದ ಕೆಲವು ಜ್ವರದಿಂದ ಬಳಲುತ್ತಿದ್ದ 12 ವರ್ಷದ ಬಾಲಕನಿಗೆ ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿತ್ತು. ಹೀಗಾಗಿ  ರಕ್ತ ತಪಾಸಣೆ ಮಾಡಲಾಗಿದ್ದು, ವರದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ ಎನ್ನಲಾಗಿದೆ. ಇಲಿ ಜ್ವರ ದೃಢ ಪಡುತ್ತಿದ್ದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಬಾಲಕನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡುವ ಕಾರ್ಯ ಮಾಡಿದ್ದಾರೆ. ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News