×
Ad

ಹಾವೇರಿ | ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Update: 2025-05-13 23:50 IST

ಹಾವೇರಿ : ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಚಿಕ್ಕಂಶಿ ಹೊಸೂರು ಗ್ರಾಮದಲ್ಲಿ ನಡೆದಿದೆ.

ಮಾಲತೇಶ ಕುರುಬರ (19), ಬಸವರಾಜ್ (38) ಮೃತರು ಎಂದು ತಿಳಿದು ಬಂದಿದೆ. ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ಮಾಲತೇಶನ ಮೃತದೇಹ ಪತ್ತೆಯಾಗಿದೆ. ಇನ್ನೋರ್ವ  ಬಸವರಾಜ್‌ನ ಮೃತದೇಹಕ್ಕಾಗಿ ಹುಡಗಾಟ ನಡೆಸಲಾಗುತ್ತಿದೆ.

ಹಾನಗಲ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News