×
Ad

ಹಾವೇರಿ | ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೊಲೆರೊ ಢಿಕ್ಕಿ : ಮೂವರು ಮೃತ್ಯು, 25 ಕುರಿಗಳು ಸಾವು

Update: 2024-04-02 20:19 IST

ಹಾವೇರಿ: ರಸ್ತೆ ಬದಿಯಲ್ಲಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಸೇರಿದಂತೆ 25 ಕುರಿಗಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಟೋಲ್ ಬಳಿ ನಡೆದಿದೆ ಎಂದು ವರದಿಯಾಗಿದೆ.

ಮೃತರನ್ನು ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಗುಡ್ಡಪ್ಪ ಕೈದಾಳಿ(40), ಮೈಲಾರಪ್ಪ ಕೈದಾಳಿ(41), ಶಿವರಾಜ್ ಹೊಳೆಪ್ಪನವರ(22) ಎಂದು ಗೊತ್ತಾಗಿದೆ.

ಬೆಳಗಾವಿಯಿಂದ ಹಾವೇರಿ ಜಿಲ್ಲೆ ಕಾಕೋಳ ಗ್ರಾಮಕ್ಕೆ ಬರುವ ಮಾರ್ಗ ಮಧ್ಯದಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬೀರಪ್ಪ ದೊಡ್ಡಚಿಕ್ಕಣ್ಣನವರ, ನಿಂಗರಾಜ್ ಹಿತ್ತಲಮನಿ ಮತ್ತಯ ನಿಂಗಪ್ಪ ಕೊರಗುಂದ ಅವರಿಗೆ ಗಂಭೀರ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಗಾಯಾಲುಗಳನ್ನು  ದಾವಣಗೆರೆ ಮತ್ತು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಬಂಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News