×
Ad

ಹುಬ್ಬಳ್ಳಿ | ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನ : ಆರೋಪಿ ಕಾಲಿಗೆ ಗುಂಡೇಟು

Update: 2024-09-23 23:11 IST

ಹುಬ್ಬಳ್ಳಿ : ಕಳ್ಳತನ ಪ್ರಕರಣದ ತನ್ನ ಸಹಚರರನ್ನು ತೋರಿಸುತ್ತೇನೆಂದು ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ಹಲ್ಲೆ ಮಾಡಿದ, ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ ಘಟನೆ ತಾರಿಹಾಳ ಬಳಿ ನಡೆದಿದೆ.

ಕಳ್ಳತ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೋದ್ ಬೆಂಡಿಗೇರಿ ಎಂಬಾತನನ್ನು ನಿನ್ನೆ(ಸೆ.22) ಬಂಧಿಸಲಾಗಿತ್ತು. ಇಂದು(ಸೆ.23) ತನ್ನ ಸಹಚರರನ್ನು ತೋರಿಸುತ್ತೇನೆಂದು ಕರೆದೊಯ್ದಿದ್ದ ವಿನೋದ್, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಎನ್ನಲಾಗಿದೆ.

ಬೆಂಡಿಗೇರಿ ಠಾಣೆ ಪೊಲೀಸ್ ಇನ್ಸ್​ಪೆಕ್ಟರ್ ಜಯಶ್ರೀ ಛಲವಾದಿ, ಕಾನ್ಸ್​ಟೇಬಲ್ ರಮೇಶ್ ಹಿತ್ತಲಮನಿ ಮೇಲೆ ಆರೋಪಿ ಹಲ್ಲೆಗೆ ಪ್ರಯತ್ನಿಸಿದ್ದು, ಆತ್ಮರಕ್ಷಣೆಗಾಗಿ ವಿನೋದ್ ಕಾಲಿಗೆ ಜಯಶ್ರೀ ಛಲವಾದಿ ಗುಂಡು ಹಾರಿಸಿದ್ದರು. ಘಟನೆಯಲ್ಲಿ ಗಾಯಗೊಂಡವರು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News