×
Ad

Hubballi | ರಾಜಕಾಲುವೆ ಕಾಮಗಾರಿ ವೇಳೆ ಮಣ್ಣು ಕುಸಿತ: ಕೂಲಿ ಕಾರ್ಮಿಕ ಮೃತ್ಯು

Update: 2026-07-02 19:03 IST

ಹುಬ್ಬಳ್ಳಿ : ರಾಜಕಾಲುವೆಗೆ ಸಂಪರ್ಕ ಕಲ್ಪಿಸುವ ಒಳಚರಂಡಿ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಬಿದ್ದ ಪರಿಣಾಮ ಕೂಲಿ ಕಾರ್ಮಿಕನೊಬ್ಬ ಮೃತಪಟ್ಟಿರುವ ಘಟನೆ ನಗರದ ಗುಜರಾತ್ ಭವನದ ಸಮೀಪ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತರನ್ನು ಧಾರವಾಡ ಜಿಲ್ಲೆಯ ಅಣ್ಣಿಗೇರಿ ತಾಲೂಕಿನ ಹಳ್ಳಿಕೇರಿ ಗ್ರಾಮದ ನಿವಾಸಿ ಮಲ್ಲಪ್ಪ ಜೋಗಿನ್ ಎಂದು ಗುರುತಿಸಲಾಗಿದೆ.

ರಾಜಕಾಲುವೆಗೆ ಸಂಪರ್ಕ ನೀಡುವ ಒಳಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ ಮಲ್ಲಪ್ಪ ಅವರು ಗುಂಡಿಯೊಳಗೆ ಇಳಿದು ಮಣ್ಣು ತೆಗೆಯುವ ಕೆಲಸದಲ್ಲಿ ನಿರತರಾಗಿದ್ದರು. ಈ ವೇಳೆ ಇತ್ತೀಚಿನ ಮಳೆಯಿಂದ ಮಣ್ಣು ಸಡಿಲಗೊಂಡಿದ್ದ ಕಾರಣ ಏಕಾಏಕಿ ಕುಸಿದು ಅವರ ಮೇಲೆ ಬಿದ್ದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News