ಹುಬ್ಬಳ್ಳಿ : ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಹುಬ್ಬಳ್ಳಿಯ ಬಂಕಾಪುರ ಚೌಕ್ ಬಳಿ ಶುಕ್ರವಾರ ಸಂಜೆ ನಡೆದಿದೆ.

ಆಟೋದಲ್ಲಿ ಬಂದಿದ್ದ ಕೆಲವರು ತೌಹಿದ್ ಮಿರ್ಜಿ ಮೇಲೆ ಹಾಕಿ ಸ್ಟಿಕ್ ಮತ್ತು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ತೌಹಿದ್ ನನ್ನು  ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor