ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವನಾಥ ಉರ್ಫ ಗಿರೀಶ ಸಾವಂತನಿಗೆ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು 45ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.

ಅಂಜಲಿ ಅಂಬಿಗೇರ (20) ಎಂಬವರನ್ನು ಪ್ರೀತಿಸುತ್ತಿದ್ದ ಗಿರೀಶನು 2024 ಮೇ 15ರಂದು ಮನೆಗೆ ನುಗ್ಗಿ ಚಾಕುವಿನಿಂದ ಭೀಕರವಾಗಿ ಚುಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದ. ನಂತರ ದಾವಣಗೆರೆಯ ರೈಲ್ವೆ ನಿಲ್ದಾಣದಲ್ಲಿ ಬಂಧಿತನಾಗಿದ್ದ.

ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಆರೋಪಿಗೆ ಜೀವಾವಧಿ, ಸಾಕ್ಷಿ ನಾಶಕ್ಕೆ ಮೂರು ವರ್ಷ, ಮನೆಯಲ್ಲಿ ನುಗ್ಗಿ ಗಲಾಟೆ ಮಾಡಿದ್ದಕ್ಕೆ ಎರಡು ವರ್ಷ ಶಿಕ್ಷೆ ಜೊತೆಗೆ 45ಸಾವಿರ ರೂ. ದಂಡ ವಿಧಿಸಿದ್ದು, ದಂಡದಲ್ಲಿ 43 ಸಾವಿರ ರೂ. ಪರಿಹಾರವನ್ನು ಅಂಜಲಿ ಸಹೋದರಿಗೆ, ಎರಡು ಸಾವಿರ ರೂ.ವನ್ನು ಸರ್ಕಾರಕ್ಕೆ ನೀಡಬೇಕೆಂದು ಆದೇಶಿಸಿದೆ.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧಿಶರಾದ ಪಲ್ಲವಿ ಬಿ.ಆರ್. ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ಸಿಐಡಿ ವಿಶೇಷ ಸರ್ಕಾರಿ ಅಭಿಯೋಜಕ ಆರ್.ಕೆ. ಕಾಳೆ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಮಹಮ್ಮದ ರಫೀಕ್ ಬೀಳಗಿ/ವಾರ್ತಾಭಾರತಿ

contributor

ಮಹಮ್ಮದ್ ರಫೀಕ್ ಬೀಳಗಿ ಅವರು ಕಳೆದ ಎರಡು ದಶಕಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರು ಬೆಂಗಳೂರು ಹಾಗೂ ಹುಬ್ಬಳ್ಳಿಯಲ್ಲಿ ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮಗಳೆರಡರಲ್ಲೂ ಕಾರ್ಯನಿರ್ವಹಿಸಿದ್ದಾರೆ. ಸುದ್ದಿ ಸಂಪಾದನೆ, ವರದಿಗಾರಿಕೆ ಸೇರಿದಂತೆ ಪತ್ರಿಕೋದ್ಯಮದ ವಿವಿಧ ಆಯಾಮಗಳಲ್ಲಿ ತಮ್ಮದೇ ಆದ ವೃತ್ತಿಪರ ಅನುಭವ ಹೊಂದಿರುವ ಅವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಧಾರವಾಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.