×
Ad

ಹುಬ್ಬಳ್ಳಿ: ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Update: 2024-05-03 11:46 IST

ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಹುಬ್ಬಳ್ಳಿಯ ಹೊರವಲಯದ ಕಾರವಾರ ರಸ್ತೆಯಲ್ಲಿ ಅನುಮಾನಸ್ಪದ ರೀತಿಯಲ್ಲಿ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ.

35-40 ವಯಸ್ಸಿನ ಆಸುಪಾಸಿನ ವ್ಯಕ್ತಿಯ ಶವವು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೊಲೆ ಎಂದು ಶಂಕಿಸಲಾಗಿದೆ. ವ್ಯಕ್ತಿ ಹಾಗೂ ಘಟನೆಯ ಬಗ್ಗೆ ಪೊಲೀಸರ ತನಿಖೆಯ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,  ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News