×
Ad

ಹುಬ್ಬಳ್ಳಿ | ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕ್ರೂಸರ್ ವಾಹನ ಢಿಕ್ಕಿ : ಇಬ್ಬರು ಮೃತ್ಯು, 10ಕ್ಕೂ ಹೆಚ್ಚು ಮಂದಿಗೆ ಗಾಯ

Update: 2025-06-04 22:38 IST

ಹುಬ್ಬಳ್ಳಿ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, 10 ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಕ್ರಾಸ್ ಬಳಿ ನಡೆದಿದೆ.

ಮದುವೆ ಕಾರ್ಯಕ್ರಮವನ್ನು ಮುಗಿಸಿ ಹಿಂತಿರುಗುವಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಹುಬ್ಬಳ್ಳಿ ಕೆಎಂಸಿಆರ್‌ಐ ಆಸ್ಪತ್ರೆಗೆ ದಾಖಲು ಮಾಡಿದ್ದು, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್ ಆಸ್ಪತ್ರೆಗೆ ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News