ಹುಬ್ಬಳ್ಳಿ | ಕೆಎಲ್‌ಇ ವೈದ್ಯಕೀಯ ಮಹಾವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡ, ಆಸ್ಪತ್ರೆ ಉದ್ಘಾಟನೆ
ಹುಬ್ಬಳ್ಳಿ: ಗಬ್ಬೂರಿನಲ್ಲಿ ನಿರ್ಮಿಸಲಾಗಿರುವ ಕೆಎಲ್‌ಇ ಜಗದ್ಗುರು ಗಂಗಾಧರ ಮಹಾಸ್ವಾಮೀಜಿ ಮೂರು ಸಾವಿರ ಮಠ ವೈದ್ಯಕೀಯ ಮಹಾವಿದ್ಯಾಲಯದ ನೂತನ ಶೈಕ್ಷಣಿಕ ಕಟ್ಟಡ ಹಾಗೂ 1,200 ಹಾಸಿಗೆಗಳ ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಕೇಂದ್ರ ಗೃಹ ಸಚಿವ ಪ್ರಹ್ಲಾದ್ ಜೋಶಿ ಅವರು ಉದ್ಘಾಟಿಸಿದರು.
ಈ ವೇಳೆ ಮೂರು ಸಾವಿರ ಮಠದ ಜ. ಗುರು ಸಿದ್ಧರಾಜಯೋಗಿಂದ್ರ ಸ್ವಾಮೀಜಿ ಸಂಸದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ, ಸಚಿವ ಶರಣ್ ಪ್ರಕಾಶ್ ಪಾಟೀಲ್, ಬಸವರಾಜ ಹೊರಟ್ಟಿ, ಶಾಸಕ ಅರವಿಂದ್ ಬೆಲ್ಲದ, ಕೆ ಎಲ್ ಇ ನಿರ್ದೇಶಕ ಪ್ರಭಾಕರ್ ಕೋರೆ ಮತ್ತಿತರರು ಉಪಸ್ಥಿತರಿದ್ದರು.