ಹುಬ್ಬಳ್ಳಿ: ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ದಾಳಿ
Update: 2025-07-23 12:45 IST
ಹುಬ್ಬಳ್ಳಿ : ಕೊಪ್ಪಳ ಡಿಸ್ಟ್ರಿಕ್ಟ್ ಇಂಡಸ್ಟ್ರಿಯಲ್ & ಕಮರ್ಷಿಯಲ್ ಟ್ಯಾಕ್ಸ್ ಉಪ ನಿರ್ದೇಶಕ ಎಸ್ .ಎಂ ಚವ್ಹಾಣ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.
ಹುಬ್ಬಳ್ಳಿಯ ವಿದ್ಯಾನಗರದ ದತ್ತನಗರದಲ್ಲಿನ ನಿವಾಸದಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ನಾಲ್ಕು ಲಕ್ಷ ನಗದು ಹಾಗೂ ಅಪಾರ ಪ್ರಮಾಣ ಬಂಗಾರ ,ಬೆಳ್ಳಿ ಪತ್ತೆಯಾಗಿದೆ.
ವಿವಿಧ ಕಡೆ ಇರುವ 12 ಸೈಟ್, ಮೂರು ಮನೆ, ಆರು ಎಕರೆ ಜಮೀನನ ದಾಖಲೆ ಸಹ ಈ ಸಂದರ್ಭ ಲಭ್ಯವಾಗಿದೆ.
ಇದೇ ಮನೆಯಲ್ಲಿ ಶೋಧಕಾರ್ಯ ಮುಂದುವರಿದಿದ್ದು, ಲೋಕಾ ಅಧಿಕಾರಿಗಳಿಂದ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ