ಹುಬ್ಬಳ್ಳಿ: ಬಸ್ ಚಾಲಕನ ಮನೆ ಮೇಲೆ ಲೋಕಾಯುಕ್ತ ದಾಳಿ
ಹುಬ್ಬಳ್ಳಿ: ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ(NWKRTC)ಯ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಎಂಬವರ ಮನೆಯ ಮೇಲೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹುಬ್ಬಳ್ಳಿ ನಗರ ಡಿಪೋದಲ್ಲಿ ಷಡಕ್ಷರಯ್ಯ ಕಾರ್ಯನಿರ್ವಹಿಸುತ್ತಿದ್ದು, ಆದಾಯ ಮತ್ತು ಸಂಪಾದಿಸಿದ ಆಸ್ತಿ ಅಸಮತೋಲನ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಹುಬ್ಬಳ್ಳಿಯ ಗಾಂಧಿ ನಗರದಲ್ಲಿರುವ ಷಡಕ್ಷರಯ್ಯರ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ಮಾಡುತ್ತಿದ್ದಾರೆ.