ಹುಬ್ಬಳ್ಳಿ: ಹೆಲ್ಮೆಟ್ ನಿಂದ ಹೊಡೆದು ಪತ್ನಿಯ ಕೊಲೆ
Update: 2026-07-08 16:12 IST
ಶಿವರಾಜ್
ಹುಬ್ಬಳ್ಳಿ, ಜು.8: ಪತ್ನಿಯನ್ನು ಹೆಲ್ಮೆಟ್ ನಿಂದ ಹೊಡೆದು ಪತಿ ಕೊಲೆಗೈದ ಘಟನೆ ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ ಬುಧವಾರ ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನಾ ಹಳೆಮನಿ(19) ಕೊಲೆಯಾದವರು. ಪತಿ ಶಿವರಾಜ್ ಕೊಲೆ ಆರೋಪಿಯಾಗಿದ್ದಾನೆ. ಇವರು ಕಳೆದ ಫೆಬ್ರವರಿಯಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಇಂದು ಬೆಳಗ್ಗೆ ಪತಿ-ಪತ್ನಿ ನಡುವೆ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಆರೋಪಿ ಶಿವರಾಜ್ ಹೆಲ್ಮೆಟ್ ನಿಂದ ಪತ್ನಿ ನಾಗರತ್ನಾರಿಗೆ ಹೊಡೆದಿದ್ದಾರೆ. ಇದರಿಂದ ಗಾಯಗೊಂಡ ನಾಗರತ್ನಾ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.