ಹುಬ್ಬಳ್ಳಿ | ಭಾರಿ ಮಳೆಗೆ ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿ : ಪೊಲೀಸರಿಂದ ಹುಡುಕಾಟ
Update: 2025-06-12 10:42 IST
ಹುಬ್ಬಳ್ಳಿ : ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೊರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಕಸಬಾಪೇಟ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಲಿ ರಸ್ತೆಯಲ್ಲಿ ನಡೆದಿದೆ.
ಬೀರಬಂದ ಓಣಿಯ ಹುಸೇನ ಕಳಸ ನೀರಿನಲ್ಲಿ ಕೊಚ್ಚಿಹೋದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಆಯ ತಪ್ಪಿ ಚರಂಡಿಯಲ್ಲಿ ಬಿದ್ದು ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ಪೊಲೀಸ್ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.