ಹುಬ್ಬಳ್ಳಿ | ಕ್ಷುಲ್ಲಕ ಕಾರಣಕ್ಕೆ ಮಗನಿಂದಲೇ ತಂದೆಗೆ ಚಾಕು ಇರಿತ
Update: 2025-08-22 14:43 IST
ಮಹಾಂತೇಶ ಸುಂಕದ
ಹುಬ್ಬಳ್ಳಿ : ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆಗೆ ಚಾಕು ಇರಿದ ಘಟನೆ ಹುಬ್ಬಳ್ಳಿಯ ಅದರಗುಂಚಿ ಗ್ರಾಮದಲ್ಲಿ ನಡೆದಿದೆ.
ಗಾಯಗೊಂಡವರನ್ನು ಯಲ್ಲಪ್ಪ ಸುಂಕದ (52) ಮತ್ತು ಆರೋಪಿಯನ್ನು ಮಗ ಮಹಾಂತೇಶ ಸುಂಕದ (22) ಎಂದು ಗುರುತಿಸಲಾಗಿದೆ.
ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೋಪಗೊಂಡ ಮಗ ಮಹಾಂತೇಶ ಸುಂಕದ ತಂದೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ.
ಗಾಯಗೊಂಡ ಯಲ್ಲಪ್ಪ ಸುಂಕದ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.