×
Ad

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಯುವತಿಯ ಹತ್ಯೆ; ಆರೋಪಿ ಪರಾರಿ

Update: 2024-05-15 09:41 IST

ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಸಾವಂತ್

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಯುವತಿಯೊಬ್ಬಳನ್ನು ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ತಾಲೂಕಿನ ವೀರಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಆರೋಪಿಯನ್ನು ವಿಶ್ವ ಅಲಿಯಾಸ್ ಗಿರೀಶ್ ಸಾವಂತ್ (21) ಎಂದು ಗುರುತಿಸಲಾಗಿದೆ. ಈತ ವೀರಾಪುರ ಓಣಿಯ ದೇವಿಗುಡಿ ನಿವಾಸಿ ಅಂಜಲಿ (20) ಎಂಬಾಕೆಯನ್ನು ಕಳೆದ ಹಲವು ದಿನಗಳಿಂದ ಪ್ರೀತಿಸುವಂತೆ ಪೀಡಿಸುತ್ತಿದ್ದು, ಆದರೆ ಅಂಜಲಿ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ.

ಇಂದು ಬೆಳ್ಳಂಬೆಳಗ್ಗೆ ಯುವತಿಯ ಮನೆಯ ಬಾಗಿಲು ತಟ್ಟಿದ ಗಿರೀಶ್, ಬಾಗಿಲು ತೆರೆಯುತ್ತಿದ್ದಂತೆಯೇ ಆಕೆಯ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಬೆಂಡಿಗೇರಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News