×
Ad

ಹುಬ್ಬಳ್ಳಿ | ಕಾಲೇಜಿನ ಆವರಣದಲ್ಲಿಯೇ ಚೂರಿ ಇರಿದು ವಿದ್ಯಾರ್ಥಿನಿಯ ಹತ್ಯೆ : ಆರೋಪಿಯ ಬಂಧನ

Update: 2024-04-18 18:49 IST

ಹುಬ್ಬಳ್ಳಿ : ವಿದ್ಯಾರ್ಥಿನಿಯೊಬ್ಬಳಿಗೆ ಮನಬಂದಂತೆ ಚಾಕುವಿನಿಂದ ಇರಿದ ಪರಿಣಾಮ ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಪಾಲಿಕೆ ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ (24) ಎಂದು ಗುರುತಿಸಲಾಗಿದೆ. ಇಂದು ಪರೀಕ್ಷೆಗೆ ತರಳಿದ್ದ ವೇಳೆ ದುಷ್ಕರ್ಮಿಯೊಬ್ಬ ಏಕಾಏಕಿ ಕುತ್ತಿಗೆಗೆ ಚಾಕು ಹಾಕಿದ್ದರಿಂದ ವಿದ್ಯಾರ್ಥಿನಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಕೂಡಲೇ ಸಹಪಾಠಿಗಳು ಹಾಗೂ ಕಾಲೇಜಿನ ಉಪನ್ಯಾಸಕರು ವಿದ್ಯಾರ್ಥಿನಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೂ ಚಿಕಿತ್ಸೆ ಫಲಿಸದೆ ನೇಹಾ ಮೃತಪಟ್ಟಿದ್ದಾಳೆ. ಇನ್ನೂ ಕಿಮ್ಸ್ ಮುಂಭಾಗದಲ್ಲಿ ಕುಟುಂಬಸ್ಥರ ಆಕ್ರಂಧನ ಮುಗಿಲು ಮುಟ್ಟಿದ್ದು, ಪೋಲಿಸರು ಸ್ಥಳಕ್ಕೆ ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಆರೋಪಿಯ ಬಂಧನ

ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನ ಹಳೇ ವಿದ್ಯಾರ್ಥಿ ಫಯಾಝ್‌  ಎಂಬಾತನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಮೂಲತಃ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾಗಿದ್ದ ಫಯಾಝ್ ಕೆಲ ದಿನಗಳಿಂದ ನೇಹಾ ಬೆನ್ನು ಬಿದ್ದಿದ್ದ‌ ಎನ್ನಲಾಗಿದೆ. ಆದರೆ ನೇಹಾ ಪ್ರೀತಿಯನ್ನು ತಿರಸ್ಕರಿಸಿದ್ದಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News