×
Ad

ಹುಬ್ಬಳ್ಳಿ | ಫ್ಲೈಓವರ್ ಕಾಮಗಾರಿ ವೇಳೆ ಅವಘಡ : ಪೊಲೀಸ್ ಅಧಿಕಾರಿಯ ಮೇಲೆ ಬಿದ್ದ ಕಬ್ಬಿಣದ ರಾಡ್, ಸ್ಥಿತಿ ಗಂಭೀರ

Update: 2024-09-10 18:38 IST

ಪೊಲೀಸ್‌ ಅಧಿಕಾರಿ ನಭೀರಾಜ್

ಹುಬ್ಬಳ್ಳಿ : ಫ್ಲೈಓವರ್ ಕಾಮಗಾರಿ ವೇಳೆ ಅವಘಡವೊಂದು ಸಂಭವಿಸಿದ್ದು, ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿಯ ಮೇಲೆ ಕಬ್ಬಿಣದ ರಾಡ್ ಬಿದ್ದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ನಭೀರಾಜ್ ಎಂಬುವರು ಕೋರ್ಟ್ ಸರ್ಕಲ್ ಬಳಿ ಬೈಕ್‌ನಲ್ಲಿ ಫ್ಲೈಓವರ್ ಬ್ರಿಡ್ಜ್ ಕೆಳಗಡೆ ಹೋಗುತ್ತಿದ್ದರು. ಆಗ ಕಬ್ಬಿಣದ ರಾಡ್‌ ಎಎಸ್‌ಐ ತಲೆಯ ಮೇಲೆ ಬಿದ್ದ ಪರಿಣಾಮ ಪೊಲೀಸ್ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕೂಡಲೇ ಸ್ಥಳೀಯರ ಸಹಾಯದಿಂದ ಗಾಯಗೊಂಡ ಪೊಲೀಸ್‌ ಸಿಬ್ಬಂದಿಯನ್ನು ಆಟೋದಲ್ಲಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಈ ಅವಘಡ ಸಂಭವಿಸುತ್ತಿದ್ದಂತೆ ಫ್ಲೈಓವರ್ ಕಾಮಗಾರಿ ನಡೆಸುತ್ತಿದ್ದ ಕೆಲಸಗಾರರು ಕ್ರೇನ್ ಬಿಟ್ಟು ಓಡಿ ಹೋಗಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಉತ್ತರ ವಿಭಾಗದ ಎಸಿಪಿ ಶಿವಪ್ರಕಾಶ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News