×
Ad

ಹುಬ್ಬಳ್ಳಿ | ನೇಹಾ ಹಿರೇಮಠ್ ಮನೆಗೆ ಸಿಐಡಿ ಅಧಿಕಾರಿಗಳ ಭೇಟಿ

Update: 2024-04-25 13:55 IST

ಹುಬ್ಬಳ್ಳಿ :  ಬಿವಿಬಿ ಕಾಲೇಜಿನಲ್ಲಿ ಕೊಲೆಯಾದ ನೇಹಾ ಹಿರೇಮಠ್ ಮನೆಗೆ ಆಗಮಿಸಿದ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ

ಇಂದು ಸಿಎಂ ಸಿದ್ದರಾಮಯ್ಯ ಅವರು ನೇಹಾ ಹಿರೇಮಠ್ ಮನೆಗೆ ಬೇಟಿ ನೀಡಲಿದ್ದು, ಅದಕ್ಕೂ  ಮುನ್ನವೇ ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೇಹಾ ಹಿರೇಮಠ್ ಪೋಷಕರೊಂದಿಗೆ ಮಾಹಿತಿ ಪಡೆದುಕೊಂಡಿದ್ದಾರೆ.

ನೇಹಾ ಮನೆಗೆ ಸಿಎಂ ಭೇಟಿ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್

ಹುಬ್ಬಳ್ಳಿಯ ಬಿಡನಾಳದಲ್ಲಿರುವ ನೇಹಾ ಹಿರೇಮಠ್ ಮನೆಗೆ ಸಿಎಂ ಸಿದ್ಧರಾಮಯ್ಯ ಅವರು ಇಂದು ಭೇಟಿ ನೀಡಲಿದ್ದಾರೆ. ಸೆಕ್ಯೂರಿಟಿ ಹೈ ಅಲರ್ಟ್ ಘೋಷಣೆ ಮಾಡಿದ್ದು, ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

ಬೆಂಗಳೂರಿನಿಂದ ತಡಸ ಗ್ರಾಮದ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸಿಎಂ ಸಿದ್ಧರಾಮಯ್ಯನವರು, ನೇಹಾ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News