×
Ad

ಹುಬ್ಬಳ್ಳಿ | ಹತ್ಯೆಯಾದ ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

Update: 2024-05-19 13:45 IST

 ಹತ್ಯೆಯಾದ ಅಂಜಲಿ ಅಂಬಿಗೇರ

ಹುಬ್ಬಳ್ಳಿ : ಕೆಲದಿನಗಳ ಹಿಂದೆ ಪ್ರೀತಿಗೆ ಸಹಕರಿಸಲಿಲ್ಲ ಎಂದು ಯುವಕನಿಂದ ಹತ್ಯೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಅಂಜಲಿ ಸಹೋದರಿ ವೀರಾಪುರ ಓಣಿಯ ತಮ್ಮ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಕುಟುಂಬಸ್ಥರು ಹಾಗೂ ಸ್ಥಳೀಯರು ಆಕೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

ಸದ್ಯ ಆಕೆ ಪ್ರಾಣಾಪಾಯದಿಂದ ಪಾರಾಗಿದದ್ದಾರೆ ಎಂದು ಕಿಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಶನಿವಾರ ಅಂಜಲಿ ಹತ್ಯೆ ಖಂಡಿಸಿ ನಡೆದ ಪ್ರತಿಭಟನೆ ವೇಳೆಯೂ ಆಕೆಯ ಸಹೋದರಿ ಪ್ರಜ್ಞೆ ತಪ್ಪಿ ಬಿದ್ದಿದ್ದಳು ಎನ್ನಲಾಗಿದೆ. ಬಳಿಕ ಪ್ರತಿಭಟನೆ ಮುಗಿದು, ಮನೆಗೆ ಹೋದ ನಂತರ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News