ಮೋಸದಿಂದ ಚುನಾವಣೆ ಗೆಲ್ಲುವಂತಹ ಪ್ರಧಾನಿಯನ್ನು ಎಲ್ಲೂ ನೋಡಿಲ್ಲ: ಸಚಿವ ಸಂತೋಷ್ ಲಾಡ್
ಹುಬ್ಬಳ್ಳಿ: ಮೋಸದಿಂದ ಚುನಾವಣೆ ಗೆಲ್ಲುವಂತಹ ಪ್ರಧಾನಿಯನ್ನು ಎಲ್ಲೂ ನೋಡಿಲ್ಲ. ಬಿಜೆಪಿ ಮೋಸದಿಂದ ಬಿಹಾರ ಚುನಾವಣೆ ಗೆದ್ದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ ಚುನಾವಣೆ ವೇಳೆ ದೆಹಲಿಯಲ್ಲಿ ಬಾಂಬ್ ಬ್ಲಾಸ್ಟ್ ಆಗುತ್ತೆ. ದೆಹಲಿ ಸ್ಫೋಟ ಆದಾಗ ಪ್ರಧಾನಿ ಎಲ್ಲಿದ್ದರು. ದುರ್ಘಟನೆ ಸಂಭವಿಸಿದ ಕೂಡಲೇ ಮೋದಿ ವಾಪಸ್ ಬರಬಹುದಿತ್ತು. ಆದರೆ ಭೂತನ್ ರಾಜನ ಹುಟ್ಟುಹಬ್ಬ ಮುಗಿಸಿ ಬಂದಿದ್ದಾರೆ ಎಂದು ಟೀಕಿಸಿದರು.
ಚುನಾವಣಾ ಆಯೋಗ ಬಿಜೆಪಿ ಅಣತಿಯಂತೆ ಕೆಲಸ ಮಾಡಿದೆ. ಪೋಸ್ಟಲ್ ಬ್ಯಾಲೆಟ್‌ನಲ್ಲಿ ಮಹಾಘಟ ಬಂಧನ್‌ಗೆ ಮುನ್ನಡೆ ಸಿಕ್ಕಿತ್ತು. ಆದರೆ ಇವಿಎಂ ನಲ್ಲಿ ಎನ್‌ಡಿಎ ಗೆಲುವು ಸಾಧಿಸಿದೆ. ಅಲ್ಲಿನ ಗೋಲ್ ಮಾಲ್ ಗೆ ಚುನಾವಣೆಯ ಅಂಕಿ ಅಂಶ ಗಳೇ ಸಾಕ್ಷಿ ಎಂದು ವಾಗ್ದಾಳಿ ನಡೆಸಿದರು.
ಕಬ್ಬು ಸಮಸ್ಯೆ ಸೇರಿ ರಾಜ್ಯದ ವಿವಿಧ ಸಮಸ್ಯೆಗಳನ್ನು ಪ್ರಧಾನಿ ಗಮನಕ್ಕೆ ತರಲಾಗಿದೆ. ಮುಖ್ಯಮಂತ್ರಿಗಳು ಪ್ರಧಾನಿಗಳ ಬಳಿ ಐದು ಬೇಡಿಕೆ ಇಟ್ಟಿದ್ದಾರೆ. ಪ್ರಧಾನಿ ಹೇಗೆ ಸ್ಪಂದಿಸುತ್ತಾರೆ ಎಂದು ಕಾದು ನೋಡೋಣ ಎಂದರು.
ಅಧಿಕಾರ ಬದಲಾವಣೆ ವಿಚಾರಕ್ಕೆ ಹೈಕಮಾಂಡ್ ನಿರ್ಣಯ ಕೈಗೊಳ್ಳುತ್ತೆ. ಉತ್ತರ ಕರ್ನಾಟಕದ ಸಮಸ್ಯೆ ಪರಿಹಾರಕ್ಕಾಗಿಯೇ ಚಳಿಗಾಲ ಅಧಿವೇಶನ ಮಾಡ್ತಾ ಇದ್ದೇವೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಕಾಂಗ್ರೆಸ್ ಅತೀ ಹೆಚ್ಚು ಸಮಯ ಕೊಟ್ಟಿದೆ. ಈ ಭಾಗದ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಿದೆ. ಅದೇ ರೀತಿ ಮುಂಬರುವ ಚಳಿಗಾಲದ ಅಧಿವೇಶನದಲ್ಲಿಯೂ ಚರ್ಚೆಗಳು ನಡೆಯುತ್ತೆ ಎಂದು ತಿಳಿಸಿದರು.