ವಿಧಾನ ಪರಿಷತ್ ಚುನಾವಣೆ; ಪಶ್ಚಿಮ ಪದವೀಧರ ಮತ ಕ್ಷೇತ್ರಕ್ಕೆ 2 ನಾಮಪತ್ರ ಸಲ್ಲಿಕೆ
ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ : ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಅಕ್ಟೋಬರ್ 1ರಂದು ಇಬ್ಬರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ಧಾರವಾಡ ಜಿಲ್ಲೆಯ ಮಲ್ಲಿಕಾರ್ಜುನ ಗಂಗಾಧರ ಅವರು ಕಿತ್ತೂರ ಕಲ್ಯಾಣ ಕರ್ನಾಟಕ ಸೇನೆ ಹಾಗೂ ಹುಬ್ಬಳ್ಳಿಯ ಮೋಹನ ಲಿಂಬಿಕಾಯಿ ಅವರು ಇಂಡಿಯನ್ ನ್ಯಾಷನಲ್ ಕಾಂಗ್ರಸ್ ಪಕ್ಷದಿಂದ ನಾಮಪತ್ರಗಳನ್ನು ಸಲ್ಲಿಸಿದ್ದಾರೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.