ಧಾರವಾಡ : ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದಿಂದ ನಡೆಯುವ ವಿಧಾನ ಪರಿಷತ್‌ನ ಚುನಾವಣೆಗೆ ಸೋಮವಾರ ಐದು ನಾಮಪತ್ರಗಳು ಸಲ್ಲಿಕೆಯಾಗಿದೆ. 

ಕಾಂಗ್ರೆಸ್‌ನಿಂದ ಮೊಹನ ಲಿಂಬಿಕಾಯಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ನಿಶಾಂತ ಬಂಕಾಪೂರ, ಪಕ್ಷೇತರರಾಗಿ ಬಸವರಾಜ ಕೊಟಗಿ, ಜಿಶಾನ ಸಿರಸಂಗಿ, ಕಾಂತಕುಮಾರ್ ಆರ್. ಅವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.

ಇಲ್ಲಿಯವರೆಗೆ ಒಟ್ಟು 8 ಅಭ್ಯರ್ಥಿಗಳಿಂದ 14 ನಾಮಪತ್ರಗಳನ್ನು ಸಲ್ಲಿಕೆಯಾಗಿವೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಹಾಗೂ ಕರ್ನಾಟಕ ಪಶ್ಚಿಮ ಪದವೀಧರರ ಮತ ಕ್ಷೇತ್ರದ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor