×
Ad

ಲೋಕಸಭಾ ಚುನಾವಣೆ : ನಿರ್ಮಲಾ ಸೀತಾರಾಮನ್‌, ಜೈಶಂಕರ್‌ ಕರ್ನಾಟಕ ದಿಂದ ಸ್ಪರ್ಧೆ ಸಾಧ್ಯತೆ ?

Update: 2024-02-27 14:26 IST
Photo: ANI

ಹುಬ್ಬಳ್ಳಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸ್ಪರ್ಧಿಸಹುದು. ಆದರೆ ಅದು ಯಾವ ಕ್ಷೇತ್ರಗಳು ಎಂಬುದನ್ನು ನಿರ್ಧರಿಸಬೇಕಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಈ ಇಬ್ಬರು ಕೇಂದ್ರ ಸಚಿವರು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದೆ. ಇಬ್ಬರೂ ಕರ್ನಾಟಕ ಅಥವಾ ಬೇರೆ ರಾಜ್ಯಗಳಿಂದ ಸ್ಪರ್ಧಿಸುವ ಸಾಧ್ಯತೆಯಿದೆ” ಎಂದರು.

ಪ್ರಸ್ತುತ, ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಗುಜರಾತ್ ರಾಜ್ಯದಿಂದ ರಾಜ್ಯಸಭೆಯ ಸದಸ್ಯರಾಗಿದ್ದರೆ, ನಿರ್ಮಲಾ ಸೀತಾರಾಮನ್ ಅವರು ಮೇಲ್ಮನೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸುತ್ತಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿ ಒಗ್ಗಟ್ಟಿನಿಂದ ಚುನಾವಣೆ ಎದುರಿಸಲಿದ್ದು, ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಲು ನಾವು ಸಂಪೂರ್ಣ ಪ್ರಯತ್ನ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಈ ಹಿಂದೆ ದೃಢಪಡಿಸಿದ್ದರು ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News