×
Ad

Dharwad | ಭೂಮಾಪನ ಇಲಾಖೆಯ ಸರ್ವೇಯರ್ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ; ಪರಿಶೀಲನೆ

Update: 2026-02-12 15:15 IST

ಧಾರವಾಡ : ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಜಿಲ್ಲೆಯ ಭೂಮಾಪನ ಇಲಾಖೆಯ (ADLR) ಸರ್ವೇಯರ್ ಸೋಮಲಿಂಗಪ್ಪ ಸಿದ್ದನಗೌಡರ್ ಅವರ ನಿವಾಸ ಹಾಗೂ ಕಚೇರಿಗಳ ಮೇಲೆ ಗುರುವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಅವರ ನೇತೃತ್ವದ ತಂಡವು ಇಂದು ಮುಂಜಾನೆಯೇ ಕಾರ್ಯಾಚರಣೆಗೆ ಇಳಿದಿದೆ. ಧಾರವಾಡದ ಭಾರತಿ ನಗರದ ಬಳಿಯಿರುವ ಲಕ್ಷೇಶ್ವರ ಗಾರ್ಡನ್‌ನಲ್ಲಿರುವ ಸೋಮಲಿಂಗಪ್ಪ ಅವರ  ಬಂಗಲೆ, ಮುರಗೋಡ್‌ನಲ್ಲಿರುವ ಅವರ ಹಳೆಯ ನಿವಾಸ ಹಾಗೂ ಅವರು ಕರ್ತವ್ಯ ನಿರ್ವಹಿಸುತ್ತಿರುವ ಎಡಿಎಲ್ ಆರ್ (ADLR) ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ಜಾಲಾಡುತ್ತಿದ್ದಾರೆ.

ಸೋಮಲಿಂಗಪ್ಪ ಅವರು ತಮ್ಮ ಅಧಿಕಾರಾವಧಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದಿಸಿದ್ದಾರೆ ಎಂಬ ಮಾಹಿತಿ ಹಾಗೂ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಸದ್ಯ ಅಧಿಕಾರಿಗಳು ಮನೆಯಲ್ಲಿರುವ ಚಿನ್ನಾಭರಣ, ನಗದು, ಆಸ್ತಿ ಪತ್ರಗಳು ಹಾಗೂ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News