×
Ad

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ತಾಯಿಗೆ ಚಾಕು ಇರಿದ ಯುವಕ

Update: 2024-09-25 19:58 IST

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ತಾಯಿಗೆ ಯುವಕನೋರ್ವ ಚಾಕು ಇರಿದ ಘಟನೆ ಲೋಹಿಯಾ ನಗರದಲ್ಲಿ ಬುಧವಾರ ನಡೆದಿದೆ.

ಮಹೇಶ್ (24) ಎಂಬಾತ ನೀಲಾ ಹಂಪಣ್ಣವರ್ ಎಂಬ ಮಹಿಳೆಗೆ ಚಾಕುವಿನಿಂದ ಇರಿದಿದ್ದಾನೆ. ಚಾಕು ಇರಿದು ಪರಾರಿಯಾಗಿದ್ದ ಮಹೇಶ್ ನನ್ನು ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡಿರುವ ನೀಲಾ ಮಗಳಿಗೆ ಆರೋಪಿ ಮಹೇಶ್ ಮದುವೆಯಾಗು ಎಂದು ಐದು ವರ್ಷದಿಂದ ಬಲವಂತ ಮಾಡುತ್ತಿದ್ದ. ಇಂದು ಏಕಾಏಕಿ ಬಂದು ನೀಲಾ ಎಂಬ ಮಹಿಳೆಗೆ ಚಾಕು ಇರಿದು ಪರಾರಿಯಾಗಿದ್ದ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ತಿಳಿಸಿದರು.

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಬಳಿಕ ನಂತರ ಮಾತನಾಡಿದ ಅವರು , ಹುಬ್ಬಳ್ಳಿಯ ಲೋಹಿಯಾ ಕಾಲೋನಿಯಲ್ಲಿ ಮಹೇಶ್ ಎಂಬಾತ ಏಕಾಏಕಿ ಬಂದು ನಿಮ್ಮನೆಲ್ಲಾ ಕೊಲೆ ಮಾಡುತ್ತೇನೆಂದು ಭಯಪಡಿಸಿ ನೀಲಾ ಎಂಬ ಮಹಿಳೆಗೆ ಚಾಕು ಇರಿದಿದ್ದಾನೆ. ಅಲ್ಲದೇ ಅಲ್ಲಿದ್ದವರಿಗೆ ಹಲ್ಲೆ ಮಾಡಲು ಮುಂದಾಗಿದ್ದಾಗ, ಅವನನ್ನು ಹೊರ ಹಾಕಿದ ಬಳಿ ಅಲ್ಲಿಂದ ಓಡಿ ಹೋಗಿದ್ದಾನೆ. ಸ್ಥಳೀಯರು ಗಂಭೀರವಾಗಿ ಗಾಯಗೊಂಡಿದ್ದ ನೀಲಾ ಎಂಬ ಮಹಿಳೆಯನ್ನು ಚಿಕಿತ್ಸೆಗೆ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News