ಧಾರವಾಡ | ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್ ಲಾಡ್ ಭೇಟಿ
Update: 2025-06-13 15:36 IST
ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು, ಶುಕ್ರವಾರ ವೀಕ್ಷಿಸಿದರು.
ಬಾಧಿತ ಪ್ರದೇಶಗಳ ವೀಕ್ಷಣೆಗೆ ಸರಕಾರಿ ಕಾರಿನಲ್ಲಿ ತೆರಳದೆ, ವಾರ್ತಾ ಇಲಾಖೆಯಿಂದ ಆಯೋಜನೆಯಾಗಿದ್ದ ಪತ್ರಕರ್ತರ ವಾಹನದಲ್ಲೇ ತೆರಳಿದ ಸಚಿವರು, ಪತ್ರಕರ್ತರೊಂದಿಗೆ ಮಾಹಿತಿ ವಿನಿಮಯ ಮಾಡಿಕೊಂಡರು.
ಇಂದು ಧಾರವಾಡ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು, ವಿವಿಧೆಡೆ ಮಳೆಯಿಂದ ತೊಂದರೆಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಾಮರ್ಶೆ ನಡೆಸಲಿದ್ದಾರೆ.