×
Ad

ಸಾರ್ವಜನಿಕವಾಗಿ ಸಿಎಂರಿಂದ ಅವಮಾನ : ಸ್ವಯಂ ನಿವೃತ್ತಿಗೆ ಮುಂದಾದ ಧಾರವಾಡ ಎಎಸ್‍ಪಿ

Update: 2025-07-02 21:35 IST

ಧಾರವಾಡ ಎಎಸ್‍ಪಿ ನಾರಾಯಣ ಭರಮನಿ

ಧಾರವಾಡ : ಇತ್ತೀಚೆಗೆ ಬೆಳಗಾವಿಯ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅವಮಾನಕ್ಕೀಡಾದ ಧಾರವಾಡ ಎಎಸ್‍ಪಿ ನಾರಾಯಣ ಭರಮನಿ ಸ್ವಯಂ ನಿವೃತ್ತಿಯಾಗಲು ಮುಂದಾಗಿದ್ದಾರೆ.

ಇದಕ್ಕೆ ಪೂರಕವೆಂಬಂತೆ ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿ ಕೋರಿ ಸರಕಾರಕ್ಕೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ. ಆದರೆ, ಹಿರಿಯ ಅಧಿಕಾರಿಗಳು ನಾರಾಯಣ ಭರಮನಿ ಅವರ ಮನವೊಲಿಕೆ ಯತ್ನ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಏನಿದು ಘಟನೆ?: ಎಪ್ರಿಲ್‍ನಲ್ಲಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದ ವೇಳೆ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವಾಗಲೇ ಕೆಲ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದರು. ಇದರಿಂದ ಆಕ್ರೋಶಗೊಂಡಿದ್ದ ಸಿದ್ದರಾಮಯ್ಯ, ‘ಏಯ್.. ಯಾರಿಲ್ಲಿ ಎಸ್ಪಿ? ಬಾರಯ್ಯ ಇಲ್ಲಿ” ಎಂದು ವೇದಿಕೆ ಮೇಲೆ ಕರೆದು ಕರ್ತವ್ಯದಲ್ಲಿದ್ದ ಧಾರವಾಡ ಎಎಸ್‍ಪಿ ನಾರಾಯಣ ಭರಮನಿ ಅವರ ಮೇಲೆ ಕೈ ಎತ್ತಿದ್ದರು. ಸಿದ್ದರಾಮಯ್ಯ ಅವರ ಈ ವರ್ತನೆಗೆ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕವಾಗಿ ಪೊಲೀಸ್ ಅಧಿಕಾರಿಯನ್ನು ಅವಮಾನಿಸುವುದು, ಅವಹೇಳನ ಮಾಡುವುದು ಸರಿಯಲ್ಲ ಎಂಬುದಾಗಿ ಸಾಕಷ್ಟು ಟೀಕೆಗಳು ವ್ಯಕ್ತವಾಗಿದ್ದವು. ಈ ಹಿನ್ನೆಲೆಯಲ್ಲಿ ನಾರಾಯಣ ಭರಮನಿ ಅವರು ಪತ್ರದಲ್ಲಿ ತಮಗಾದ ಅವಮಾನದ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News