×
Ad

ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಾಗಿಯೇ ಪೀಠ ತೊರೆದರೆ ಸಂತೋಷ : ವಿಜಯಾನಂದ ಕಾಶಪ್ಪನವರ

Update: 2025-07-20 17:10 IST

ಹುಬ್ಬಳ್ಳಿ: ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ನೂತನ ಪೀಠಾಧಿಪತಿಗಳ ನೇಮಕಕ್ಕೆ ಚಿಂತನೆ ನಡೆದಿದ್ದು, ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಹೇಳಿದರು.

ಶನಿವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪೀಠಕ್ಕೆ ನೂತನ ಸ್ವಾಮೀಜಿಯನ್ನು ನೇಮಕ ಮಾಡಲು ನಿರ್ಧರಿಸಲಾಗಿದ್ದು, ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರಾಗಿಯೇ ಪೀಠ ತೊರೆದರೆ ಸಂತೋಷ. ಸ್ವಾಮೀಜಿ ಅವರ ವರ್ತನೆ, ನಡವಳಿಕೆಯಲ್ಲಿ ತೀವ್ರ ಬದಲಾವಣೆಯಾಗಿದೆ. ಸಮಾಜದ ಹಿರಿಯರು ಸಭೆ ನಡೆಸಿ ಪರ್ಯಾಯ ಗುರುಗಳ ನೇಮಕದ ಬಗ್ಗೆ ಚರ್ಚಿಸಿದ್ದಾರೆ ಎಂದರು

ಟ್ರಸ್ಟ್ ಬೈಲಾ ಪ್ರಕಾರ ಸ್ವಾಮೀಜಿ ಸ್ವಂತ ಆಸ್ತಿ ಹೊಂದುವಂತಿಲ್ಲ. ಅದರೆ, ಬೆಳಗಾವಿಯಲ್ಲಿ ಎರಡು ಮನೆ, ಹುಬ್ಬಳ್ಳಿ-ಬೆಂಗಳೂರಲ್ಲಿ ತಲಾ ಒಂದೊಂದು ಮನೆ ಅವರ ಹೆಸರಲ್ಲಿ ಇವೆ. ಮಲಪ್ರಭಾ ದಂಡೆ ಮೇಲೆ ಮಠ ಕಟ್ಟುತ್ತೇನೆ, ಸಂಸ್ಥೆ ಕಟ್ಟಿ ಸಮಾಜದ ಬಡ ಮಕ್ಕಳಿಗೆ ಶಿಕ್ಷಣ ಕಲ್ಪಿಸುತ್ತೇನೆ ಎಂದು ಸ್ವಾಮೀಜಿ ಹೇಳುತ್ತಿರುವುದು ಬೈಲಾ ವಿರುದ್ಧವಾಗಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News