×
Ad

Saudi Arabia | ಉಮ್ರಾ ಯಾತ್ರಿಕರಿದ್ದ ಬಸ್ ಅಪಘಾತ ಪ್ರಕರಣ; ಹುಬ್ಬಳ್ಳಿ ಮೂಲದ ವ್ಯಕ್ತಿ ಮೃತ್ಯು

Update: 2025-11-17 20:01 IST

ಅಬ್ದುಲ್ ಘನಿ ಶಿರಹಟ್ಟಿ (55)

ಹುಬ್ಬಳ್ಳಿ, ನ.17 : ಮಕ್ಕಾದಿಂದ ಮದೀನಾಗೆ ತೆರಳುತ್ತಿದ್ದ ಉಮ್ರಾ ಯಾತ್ರಿಕರಿದ್ದ ಬಸ್ ಸೌದಿ ಅರೇಬಿಯಾದ ಮುಫ್ರಿಹತ್ ಬಳಿ ಸೋಮವಾರ ಮುಂಜಾನೆ ಡೀಸೆಲ್ ಟ್ಯಾಂಕರ್‌ಗೆ ಢಿಕ್ಕಿ ಹೊಡೆದ ಪರಿಣಾಮ 45 ಮಂದಿ ಭಾರತೀಯ ಯಾತ್ರಿಕರು ಮೃತಪಟ್ಟಿದ್ದರು. ಈ ದುರಂತದಲ್ಲಿ ಕರ್ನಾಟಕದ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

ಮೃತರನ್ನು ಹುಬ್ಬಳ್ಳಿ ನಗರದ ಗಣೇಶ ಪೇಟೆ ನಿವಾಸಿ ಅಬ್ದುಲ್ ಘನಿ ಶಿರಹಟ್ಟಿ (55) ಎಂದು ಗುರುತಿಸಲಾಗಿದೆ.

ದುಬೈನ ಹೋಟೆಲ್‌ವೊಂದರಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ಘನಿ ಅವರು, ದುಬೈನಿಂದ ಸೌದಿಗೆ ಉಮ್ರಾಗೆ ತೆರಳಿದ್ದರು. ಆದರೆ, ಸೋಮವಾರ ನಡೆದ ಭೀಕರ ಅಪಘಾತದಲ್ಲಿ ಅವರು ಸಾವನ್ನಪ್ಪಿದ್ದಾರೆ.

ಮೃತರಲ್ಲಿ ಹೆಚ್ಚಿನವರು ಹೈದರಾಬಾದ್ ಮೂಲದವರು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News