ಹುಬ್ಬಳ್ಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ
ಹುಬ್ಬಳ್ಳಿ: ಕೆಎಲ್ಇ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ, ಕೆಲ್ಇ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಉದ್ಘಾಟನೆಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅಮಿತ್ ಶಾರನ್ನು ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಹೂಹಾರ, ಹೂಗುಚ್ಛ ನೀಡಿ, ಶಾಲು ಹೊದಿಸಿ ಸ್ವಾಗತಿಸಿದರು.
ಇಲ್ಲಿನ ಗಬ್ಬೂರು ಕ್ರಾಸ್ ಬಳಿ ನಿರ್ಮಾಣವಾಗಿರುವ ಕೆಎಲ್ಇ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡಮಿ (ಕಾಹೇರ್)ಯ ಜೆಜಿಎಂಎಂ ವೈದ್ಯಕೀಯ ಕಾಲೇಜು ಕಟ್ಟಡ, ಕೆಎಲ್ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವನ್ನು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಉದ್ಘಾಟಿಸುವರು.