×
Ad

ಪ್ರಧಾನಿ ಮೋದಿಗೆ ಕಾಂಗ್ರೆಸ್ ಬಗ್ಗೆ ಮಾತನಾಡಲು ನೈತಿಕತೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

Update: 2024-11-10 19:40 IST

ಯತೀಂದ್ರ ಸಿದ್ದರಾಮಯ್ಯ

ಹುಬ್ಬಳ್ಳಿ: ಚುನಾವಣಾ ಬಾಂಡ್ ಹೆಸರಿನಲ್ಲಿ ಪ್ರಧಾನಿ ಮೋದಿ ಸರಕಾರ ದೇಶದ ಇಡೀ ರಾಜಕೀಯ ವ್ಯವಸ್ಥೆಯನ್ನು ಭಷ್ಟ ಮಾಡಿರುವಾಗ, ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಧಾನ ಪರಿಷತ್ತಿನ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ʼರಾಜ್ಯದಲ್ಲಿನ ಕಾಂಗ್ರೆಸ್ ಸರಕಾರ ಅಸ್ಥಿರಗೊಳಿಸಬೇಕು. ಅದಕ್ಕೆ ತಡೆಯಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲು ಕೆಳಗಿಳಿಸಬೇಕು ಎಂದು ಬಿಜೆಪಿ ಹುನ್ನಾರ ನಡೆಸಿದೆʼ ಎಂದು ಆರೋಪಿಸಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶಾದ್ಯಂತ ಕಾಂಗ್ರೆಸ್ ಸರಕಾರ ಆಡಳಿತದಲ್ಲಿರುವ ರಾಜ್ಯಗಳಲ್ಲಿನ ಕಾಂಗ್ರೆಸ್ ಮುಖಂಡರ ಮೇಲೆ ಈಡಿ ದಾಳಿ ನಡೆಸಿ ಸರಕಾರಗಳನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆದಿವೆ ಎಂದೂ ಅವರು ಉಲ್ಲೇಖಿಸಿದರು.

ಉಪಚುನಾವಣೆ ನಡೆಯುತ್ತಿರುವ ಶಿಗ್ಗಾಂವಿ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಎಲ್ಲೆಡೆ ಪಕ್ಷದ ಪರ ಉತ್ತಮ ವಾತಾವರಣವಿದೆ ಎಂದು ಡಾ. ಯತೀಂದ್ರ ನುಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News