×
Ad

ರಾಜ್ಯದಲ್ಲಿ ಸಿಎಂ, ಕೆಪಿಸಿಸಿ ಅಧ್ಯಕ್ಷ ಎರಡೂ ಕುರ್ಚಿ ಖಾಲಿಯಿಲ್ಲ : ಝಮೀರ್ ಅಹ್ಮದ್

Update: 2025-01-19 17:15 IST

ಝಮೀರ್ ಅಹ್ಮದ್‌ ಖಾನ್

ಹುಬ್ಬಳ್ಳಿ : ʼರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿಯೂ ಖಾಲಿ ಇಲ್ಲ, ಕೆಪಿಸಿಸಿ ಅಧ್ಯಕ್ಷ ಕುರ್ಚಿಯೂ ಖಾಲಿ ಇಲ್ಲ‌ʼ ಎಂದು ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹ್ಮದ್‌ ಖಾನ್ ಹೇಳಿದ್ದಾರೆ.

ರವಿವಾರ ಹುಬ್ಬಳ್ಳಿಯಲ್ಲಿ ಸುದ್ಧಿಗಾರರ ಜತೆ ಮಾತನಾಡಿದ ಅವರು, ʼಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಅವರಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಡಿ.ಕೆ.ಶಿವಕುಮಾರ್ ಕುಳಿತಿದ್ದಾರೆ. ನಮ್ಮದು ಹೈಕಮಾಂಡ್ ಪಕ್ಷ, ಹೈಕಮಾಂಡ್ ಹಾಕಿದ ಗೆರೆ ನಾವು ದಾಟುವುದಿಲ್ಲ. ಏನೇ ತೀರ್ಮಾನ ಮಾಡಿದರೂ ಪಕ್ಷ ಮಾಡುತ್ತದೆ. ಉಹಾಪೋಹ ಅನಗತ್ಯʼ ಎಂದು ಹೇಳಿದರು.

ಗಾಂಧಿ ಭಾರತ ಕಾರ್ಯಕ್ರಮದ ಕುರಿತು ಪ್ರತಿಕ್ರಿಯಿಸಿ, ʼಈ ಹಿಂದೆ ಮನಮೋಹನ್ ಸಿಂಗ್ ಅವರ ನಿಧನದಿಂದ ಮುಂದೂಡಿದ್ದ ಕಾರ್ಯಕ್ರಮ ಜ.21ರಂದು ನಿಗದಿಯಾಗಿದ್ದು, ಅರ್ಥಪೂರ್ಣ ವಾಗಿ ಆಚರಿಸಲಿದ್ದೇವೆ. ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸಹಿತ ಎಲ್ಲ ನಾಯಕರು ಭಾಗವಹಿಸಲಿದ್ದಾರೆ, ಎಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News