×
Ad

ವಿದ್ಯಾರ್ಥಿಗಳಿಗೆ ಮಾದಕ ವಸ್ತು ಜಾಗೃತಿ ಕಾರ್ಯಕ್ರಮ

Update: 2025-08-16 18:10 IST

ಉಡುಪಿ, ಆ.16: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜು ಹಾಗೂ ಪದವಿ ಪೂರ್ವ ಕಾಲೇಜಿನ ವತಿಯಿಂದ ಮಾದಕ ವಸ್ತು ಜಾಗೃತಿ ಕಾರ್ಯಕ್ರಮವನ್ನು ಶನಿವಾರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಮಲ್ಪೆ ಪೋಲೀಸ್ ಠಾಣೆಯ ವೃತ್ತ ನಿರೀಕ್ಷಕ ರಾಮಚಂದ್ರ ನಾಯಕ್, ವಿದ್ಯಾರ್ಥಿ ಗಳಿಗೆ ಮಾದಕ ವಸ್ತುಗಳ ಬಳಕೆಯಿಂದಾಗುವ ಅನಾಹುತಗಳು, ಯುವಜನರ ಮೇಲೆ ಬೀರುವ ದುಷ್ಪರಿಣಾಮಗಳು ಮತ್ತು ಆರೋಗ್ಯಕರ ಜೀವನಶೈಲಿಯ ಅಗತ್ಯತೆಗಳ ಕುರಿತು ಪ್ರಭಾವಶಾಲಿ ಹಾಗೂ ಚಿಂತನೀಯ ಉಪನ್ಯಾಸ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ ಮಾತನಾಡಿ, ಶಿಕ್ಷಣ ಸಂಸ್ಥೆಗಳು ಯುವ ಜನರ ಜೀವನದಲ್ಲಿ ಮೌಲ್ಯಾಧಾರಿತ ಚಿಂತನೆ ಹಾಗೂ ಶಿಸಿತಿನ ಜೀವನ ಶೈಲಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಅಲ್ಲದೆ ಇಂತಹ ಜಾಗೃತಿ ಕಾರ‌್ಯಕ್ರಮಗಳು ವಿದ್ಯಾರ್ಥಿಗಳಿಗೆ ಜವಾಬ್ದಾರಿಯುತ ನಿರ್ಧಾರ ಕೈಗೊಳ್ಳಲು ದಾರಿದೀಪ ವಾಗುತ್ತದೆ. ಮಾದಕ ವಸ್ತು ರಹಿತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ತಿಳಿಸಿದರು.

ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರಿಚರ್ಡ ಜೀವನ್ ಮೋರಸ್, ಮಿಲಾಗ್ರಿಸ್ ಪದವಿ ಕಾಲೇಜಿನ ಉಪಪ್ರಾಂಶುಪಾಲೆ ಸೋಫಿಯಾ ಡಯಾಸ್, ಮಿಲಾಗ್ರಿಸ್ ಪದವಿಪೂರ್ವ ಕಾಲೇಜಿನ ಮಾದಕ ವಸ್ತು ಜಾಗೃತಿ ಸಮಿತಿಯ ಸಂಯೋಜಕಿ ರೀನಾ ಫೆರ್ನಾಂಡಿಸ್ ಮೊದಲಾದ ವರು ಉಪಸ್ಥಿತರಿದ್ದರು. ಮಿಲಾಗ್ರಿಸ್ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ರವಿನಂದನ್ ಭಟ್ ಕಾರ್ಯಕ್ರಮ ನಿರೂಪಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News