×
Ad

ಆಡಳಿತ ಪಕ್ಷದವರೇ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ : ಬಸವರಾಜ ಬೊಮ್ಮಾಯಿ

Update: 2024-10-07 14:37 IST

ಬಸವರಾಜ ಬೊಮ್ಮಾಯಿ

ಗದಗ : "ಮುಖ್ಯಮಂತ್ರಿ ಬದಲಾವಣೆಗಾಗಿ ಕಾಂಗ್ರೆಸ್ ಪಕ್ಷದಲ್ಲಿ ಬಹಳಷ್ಟು ಚಟುವಟಿಕೆ ನಡೆಯುತ್ತಿದೆ. ವಿಶೇಷವಾಗಿ ಹಿರಿಯ ಸಚಿವರು ದೆಹಲಿ ಭೇಟಿ ಮಾಡುವುದು ನೋಡಿದರೆ ಗೊತ್ತಾಗುತ್ತದೆ. ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರೆ ಸಿಎಂ ಬದಲಾವಣೆಗೆ ಅವಸರ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಲು ಮಾನಸಿಕವಾಗಿ ಸಿದ್ದರಾಗುತ್ತಿದ್ದಾರೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಸೋಮವಾರ ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼಸಿಎಂ ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಸರಕಾರ ಬರುವುದಿಲ್ಲ, ನಮಗೆ ಅವಕಾಶ ಇದೆ. ಹೀಗಾಗಿ ಸರಕಾರ ಉಳಿಸಿಕೊಳ್ಳಲು ಸತತ, ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಆಡಳಿತ ಸ್ಥಗಿತವಾಗಿದೆʼ ಎಂದರು.

ʼಯಾವುದೇ ಅಭಿವೃದ್ಧಿಗೆ ಹಣ ಬಿಡುಗಡೆ ಆಗುತ್ತಿಲ್ಲ. ರಾಜ್ಯಕ್ಕೆ ಸಾಕಷ್ಟು ಹಿನ್ನಡೆಯಾಗುತ್ತಿದೆ. ಇಂತಹ ಸರಕಾರದ ಪಡೆದಿರುವುದು ಕರ್ನಾಟಕದ ದೌರ್ಭಾಗ್ಯ, ಆದರೆ, ಈ ಸರಕಾರವನ್ನು ಅಭದ್ರಗೊಳಿಸುವ ಕೆಲಸವನ್ನು ನಾವು ಮಾಡುವುದಿಲ್ಲʼ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News