×
Ad

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಾಣ : ಸಿಎಂ ಸಿದ್ದರಾಮಯ್ಯ

Update: 2025-06-03 16:13 IST

ಲಕ್ಕುಂಡಿ : ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರು ದೇವಸ್ಥಾನ, ಕೋಟೆಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು.

ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News