×
Ad

ಡಿ. 27: ಗಜೇಂದ್ರಗಡದಲ್ಲಿ ರಾಜ್ಯ ಮಟ್ಟದ ‘ಮುಸ್ಲಿಮ್‌ ಸಾಹಿತ್ಯ ಪ್ರಶಸ್ತಿ’ ಪ್ರದಾನ; ಕನ್ನಡ, ಉರ್ದು ಕವಿಗೋಷ್ಠಿ

Update: 2025-12-25 14:24 IST

ಗದಗ: ಮುಸ್ಲಿಮ್‌ ಲೇಖಕರ ಸಂಘವು ಮರ್ಹೂಮ್ ಯು.ಟಿ. ಫರೀದ್ ಸ್ಮರಣಾರ್ಥ ಕೊಡಮಾಡುವ 2024ನೇ ಸಾಲಿನ ರಾಜ್ಯ ಮಟ್ಟದ 'ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ' ಪ್ರದಾನ ಹಾಗೂ ಕನ್ನಡ ಮತ್ತು ಉರ್ದು ಕವಿಗೋಷ್ಠಿಯು ಡಿ 27ರಂದು ಬೆಳಿಗ್ಗೆ 10.30ಕ್ಕೆ ಗಜೇಂದ್ರಗಡದ ಶ್ರೀ ಜಗದ್ಗುರು ತೋಂಟದಾರ್ಯ ಸಿಬಿಎಸ್‌ಇ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.

ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದು, ಡಾl ಐ.ಜೆ. ಮ್ಯಾಗೇರಿ (ಕೃತಿ: ʼಜೈಲ್‌ ಡೈರಿʼ) ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಸಚಿವ ಡಾl ಎಚ್.ಕೆ. ಪಾಟೀಲ್‌, ಸರ್ಕಾರದ ಮುಖ್ಯ ಸಚೇತಕ ಸಲೀಂ ಅಹ್ಮದ್‌, ಕರ್ನಾಟಕ ರಾಜ್ಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ, ಶಾಸಕ ಜಿ.ಎಸ್.‌ ಪಾಟೀಲ್‌ ಹಾಗೂ ಶಾಸಕ ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುಸ್ಲಿಮ್‌ ಲೇಖಕರ ಸಂಘದ ಅಧ್ಯಕ್ಷ ಉಮರ್‌ ಯು.ಹೆಚ್.‌ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡ ಮತ್ತು ಉರ್ದು ಕವಿಗೋಷ್ಠಿಯಲ್ಲಿ ಕವಿಗಳಾದ ಎ. ಎಸ್.‌ ಮಕಾನದಾರ, ಡಾ. ಹಸೀನಾ ಖಾದ್ರಿ, ಶಿಲ್ಪಾ ಮ್ಯಾಗೇರಿ, ಮೊಹಮ್ಮದ್‌ ಅರ್ಶದ್‌ ಹಿರೇಹಾಳ, ಮುರ್ತುಜಾ ಬೇಗಂ ಕೊಡಗಲಿ, ಅನ್ವರ್ ಅಹ್ಮದ್‌ ವಣಗೇರಿ ಮತ್ತು ಖಾಝಿ ಶಬ್ಬೀರ್‌ ಅಹ್ಮದ್‌, ಶಬ್ಬೀರ್‌ ಮನ್ಸೂರಿ ಭಾಗವಹಿಸಲಿದ್ದಾರೆ. ಮುಸ್ಲಿಮ್‌ ಲೇಖಕರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಮುಹಮ್ಮದ್‌ ಅಲಿ ಕಾರ್ಯಕ್ರಮ ನಿರೂಪಿಸಲಿದ್ದಾರೆ ಎಂದು ಮುಸ್ಲಿಮ್‌ ಲೇಖಕರ ಸಂಘದ ಪ್ರಕಟಣೆ ತಿಳಿಸಿದೆ.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News